ಉದ್ಯೋಗ ಅರಸಿ ಹೊರಟಿದ್ದ ಯುವಕನಿಗೆ ಎದುರಾದ ಜವರಾಯ

Bike_Accident
Published on


ತುಮಕೂರು:
ಉದ್ಯೋಗ ಅರಸಿ ಬೆಂಗಳೂರಿಗೆ ಹೊರಟಿದ್ದ ಯುವಕ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಬಳಿ ಗುರುವಾರ ತಡರಾತ್ರಿ ನಡೆದಿದೆ.

ಬೆಂಗಳೂರಿಗೆ ಬೈಕ್‌ನಲ್ಲಿ ಹಾವೇರಿ ಯುವಕರಿಬ್ಬರು ತೆರಳುತ್ತಿದ್ದು ನಗರದ ಹನುಮಂತಪುರದ ಸೇತುವೆ ಬಳಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಸಚಿನ ವೀರಪ್ಪ ಮಾಳಗಿ (21) ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ.


ಬೈಕ್ ಓಡಿಸುತ್ತಿದ್ದ ಮಲ್ಲಿಕಾರ್ಜುನ್ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕರಿಬ್ಬರು ಉದ್ಯೋಗ ಅರಸಿ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.
ತುಮಕೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net