

ಉಡುಪಿ: ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26) ಮೃತ ಯುವಕ. ಅವಿವಾಹಿತರಾಗಿದ್ದ ಇವರು, ಇಂದ್ರಾಳಿಯ ದೇವಸ್ಥಾನದಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆಗೆ ಅಡಿಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಶವವನ್ನು ಕೆ.ಎಂಸಿ ವೈದ್ಯಕಿಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಿದರು.