ಸಿರಗುಪ್ಪ: ರಾಷ್ಟ್ರೀಯ ಹೆದ್ದಾರಿ 150ಎ ಬಳಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿದ್ದಾರೆ.
ಬಂಡ್ರಾಳು ಗ್ರಾಮದ ಶಂಭುಲಿಂಗಪ್ಪ (55) ಮೃತ. ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ 64 ಹಳೇಕೋಟೆ ಗ್ರಾಮದ ಮಾರೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ದರ್ಶನಕ್ಕೆ ತೆರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.