ಬೈಕ್ ಅಪಘಾತದಲ್ಲಿ ಹಿಂಬದಿ ಸವಾರ ಸಾವು

Bike Accident_2
Published on

ಹಾವೇರಿ: ಬೈಕ್‌ಗೆ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ಬಿದ್ದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ತಾಲೂಕಿನ ದೇವಗಿರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ಗ್ರಾಮದ ಸಲೀಂಅಹ್ಮದ್ ಮಕ್ತುಮಹುಸೇನ ತರ್ಲಘಟ್ಟ ಮೃತ ವ್ಯಕ್ತಿ. ಬೈಕ್ ಸವಾರ ಖಾಸಿಎಂಸಾಬ ಎಂಬುವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ಇವರು ಬೈಕ್‌ನಲ್ಲಿ ತೆರಳುತ್ತಿದ್ದ ಸಮಯದಲ್ಲಿ ರಸ್ತೆಯಲ್ಲಿ ನಾಯಿ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಇದರಿಂದ ಕೆಳಗೆ ಬಿದ್ದ ಸಲೀಂಅಹ್ಮದಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net