ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಓರ್ವ ಸಾವು

Bike Accident
Published on

ಸವಣೂರ: ಬೈಕ್ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ತಳ್ಳಳ್ಳಿ-ಹತ್ತಿಮತ್ತೂರ ಗ್ರಾಮದ ರಸ್ತೆಯಲ್ಲಿ ಗುರುವಾರ ನಡೆದಿದೆ.
ಹತ್ತಿಮತ್ತೂರಿನ ವಾಸಪ್ಪ ನಿಂಗಪ್ಪ ಲಮಾಣಿ ಮೃತ ವ್ಯಕ್ತಿ.
ಇವರು ಬೈಕ್ ಮೇಲೆ ಹೊರಟಿದ್ದ ಸಮಯದಲ್ಲಿ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ವಾಸಪ್ಪ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net