ಬೈಕ್​ಗೆ ಮತ್ತೊಂದು ಬೈಕ್​ ಡಿಕ್ಕಿ; ಒಬ್ಬ ಸಾವು

Crime Logo
Published on

ರಟ್ಟಿಹಳ್ಳಿ: ಬೈಕ್​ಗೆ ಮತ್ತೊಂದು ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಪಟ್ಟಣದ ಭಗತ್​ಸಿಂಗ್​ ವೃತ್ತದಲ್ಲಿ ಬುಧವಾರ ನಡೆದಿದೆ.

ತಾಲೂಕಿನ ಕುಂಚೂರ ಗ್ರಾಮದ ರುದ್ರೇಶ ಈರಪ್ಪ ಬಣಕಾರ (23) ಮೃತ ವ್ಯಕ್ತಿ.

ಈತ ಬೈಕ್​ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಮತ್ತೊಂದು ಬೈಕ್​ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರುದ್ರೇಶನನ್ನು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net