ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ; ಓರ್ವ ಸವಾರ ಸಾವು

Bike Accident_2
Published on

ರಟ್ಟಿಹಳ್ಳಿ: ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತಾವರಗಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಪಟ್ಟಣದ ಮಲ್ಲಿಕಾರ್ಜುನ ರುದ್ರಪ್ಪ ಜ್ಯೋತಿಬಣ್ಣದ (69) ಮೃತ ಸವಾರ.
ಇವರು ಬೈಕ್ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಮತ್ತೊಂದು ಬೈಕ್ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net