ಮಡಿಕೇರಿಯಲ್ಲಿ ಭೀಕರ ಅಪಘಾತ; ಕೆಎಸ್​ಆರ್​ಟಿಸಿ ಬಸ್ಸಿಗೆ ಯುವಕ ಬಲಿ

accident
Published on

ಕೊಡಗು: ಕೆಎಸ್​ಆರ್​ಟಿಸಿ ಬಸ್ಸು ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.

ಬಸ್ಸು ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿತ್ತು. ಈ ವೇಳೆ ತಾಳತಮನೆ ಸಮೀಪ ಅಪಘಾತ ಸಂಭವಿಸಿದೆ. ತಾಲೂಕಿ‌ ಮದೆ ಗ್ರಾಮದ ಕೀರ್ತನ್ ಬಸ್ಸಿಗೆ ಸಿಕ್ಕು ಗಂಭೀರ ಗಾಯಾಳುವಾಗಿದ್ದಾನೆ. ತಕ್ಷಣವೇ ಆತನನ್ನು ಮಂಗಳೂರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಆತ ಕೊನೆಯುಸಿರೆಳೆದಿದ್ದಾನೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net