ಬೈಕ್‌ಗೆ ಕಾರು ಡಿಕ್ಕಿ, ಬೈಕ್‌ನ ಹಿಂಬದಿ ಸವಾರ ಸಾವು

23-RNR-10 rajashekar
Published on

ರಾಣೆಬೆನ್ನೂರ: ಬೈಕ್‌ಗೆ ಹಿಂಬದಿಯಿಂದ ಯಾವುದೊ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೆ ಮೃತಪಟ್ಟು ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಹಲಗೇರಿ-ರಟ್ಟಿಹಳ್ಳಿ ರಸ್ತೆಯಲ್ಲಿ ಭಾನುವಾರ ಸಂಭವಿಸಿದೆ.
ರಟ್ಟಿಹಳ್ಳಿಯ ರಾಜಶೇಖರ ಕರಬಸಪ್ಪ ಹರವಿಶೆಟ್ಟರ (18) ಮೃತ ಯುವಕ. ಬೈಕ್ ಓಡಿಸುತ್ತಿದ್ದ ಮಲ್ಲಿಕಾರ್ಜುನ ಹರವಿಶೆಟ್ಟರ (19) ಎಂಬುವನು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಹಲಗೇರಿ ಕಡೆಯಿಂದ ರಟ್ಟಿಹಳ್ಳಿಗೆ ಹೊರಟ್ಟಿದ್ದರು. ದಾರಿ ಮಧ್ಯೆ ಯಾವುದೋ ಕಾರು ಡಿಕ್ಕಿ ಹೊಡೆದ ಪರಿಣಾಮ ರಾಜಶೇಖರ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಮಲ್ಲಿಕಾರ್ಜುನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net