ಸುಂಟಿಕೊಪ್ಪ: ಸುಂಟಿಕೊಪ್ಪ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ
ಪಿರಿಯಾಪಟ್ಟಣ ತಾಲೂಕು ನವಿಲೂರು ಗ್ರಾಮದ ಆಕಾಶ್ (24) ಹಾಗೂ ಪ್ರಸನ್ನ (24) ಮೃತಪಟ್ಟವರು.
ಪಿರಿಯಾಪಟ್ಟಣದ ನವಿಲೂರಿನಿಂದ ಮಡಿಕೇರಿಗೆ ದ್ವಿಚಕ್ರ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ನಿಮಿತ್ತ ತೆರಳುತ್ತಿದ್ದ ವೇಳೆ ಶಾಂತಿಗೇರಿ ಸಮೀಪ ರಾತ್ರಿ ಇವರ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಆಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಿಂದ ಚಿಂತಾಜನಕನಾಗಿದ್ದ ಪ್ರಸನ್ನನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.