ಬೈಕ್ ಡಿಕ್ಕಿಯಾಗಿ ಕುರಿಗಾಹಿ ಸಾವು

Bike Accident_2
Published on

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಮುರಗುಂಡಿ-ಹಣಮಾಪುರ ಸಂಪರ್ಕ ರಸ್ತೆ ಮೇಲೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುರಿಗಾಹಿ ಹಣಮಾಪುರ ಗ್ರಾಮದ ಮಾರುತಿ ಪೂಜಾರಿ (61) ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.

ಕುರಿ ಮೇಯಿಸಿಕೊಂಡು ಮರಳಿ ಹಣಮಾಪುರಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಾರುತಿಯನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರಕ್ಕೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net