ಬೈಕ್​ ಡಿಕ್ಕಿಯಾಗಿ ಪಾದಚಾರಿ ಸಾವು

Crime Logo
Published on

ಸವಣೂರ: ಬೈಕ್​ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಟನೆ ಪಟ್ಟಣದ ಖಬರಸ್ತಾನದ ಬಳಿ ಭಾನುವಾರ ನಡೆದಿದೆ.

ಪಟ್ಟಣದ ನೂರಅಹ್ಮದ್​ ಸತ್ತಾರಬೇಗ ಮಿರ್ಜಾ (64) ಮೃತ ವ್ಯಕ್ತಿ.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದು ಬೈಕ್​ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ನೂರಅಹ್ಮದ್​ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net