ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

Bike Accident_2
Published on

ರಾಣೆಬೆನ್ನೂರ: ಬೈಕ್ ಸವಾರನೊಬ್ಬ ರಸ್ತೆ ಬದಿ ಹೊರಟಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ತಾಲೂಕಿನ ಹಲಗೇರಿ-ಇಟಗಿ ಗ್ರಾಮದ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ.
ನಗರದ ಅಡವಿ ಆಂಜನೇಯ ಬಡಾವಣೆಯ ನಿವಾಸಿ ಆರೀಪ್‌ವುಲ್ಲಾ ರಶೀದ ಎಲಿಗಾರ ಮೃತ ವ್ಯಕ್ತಿ.
ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಎದುರಿಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ನಂತರ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆರೀಪ್‌ವುಲ್ಲಾನನ್ನು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net