ಬಾಲಕಗೆ ಬೈಕ್ ಕೊಟ್ಟಿದ್ದಕ್ಕೆ ₹25 ಸಾವಿರ ದಂಡ

Court-Logo1
Published on

ಗಂಗಾವತಿ: ಅಪ್ರಾಪ್ತ ಬಾಲಕನಿಗೆ ಬೈಕ್ ಕೊಟ್ಟ ಕಾರಣಕ್ಕಾಗಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯವು ಬೈಕ್ ಮಾಲೀಕರಿಗೆ 25ಸಾವಿರ ರೂ. ದಂಡ ಹಾಕಿದ ಘಟನೆ ಗುರುವಾರ ನಡೆದಿದೆ.

ನಗರದ ಪಂಪಾ ನಗರದ ಬಳಿ ಅಪ್ರಾಪ್ತ ಬಾಲಕ ಬೈಕ್‌ನಲ್ಲಿ ತೆರಳುತ್ತಿದ್ದು, ಕರ್ತವ್ಯದಲ್ಲಿದ್ದ ಸಂಚಾರಿ ಪಿಎಸೈ ಶಾರದಮ್ಮ ಎಂಬುವರು ಬೈಕ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ ನಗರದ ಜೆಎಂಎಫ್‌ಸಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ, ಬೈಕ್ ಮಾಲೀಕರಿಗೆ ಏ.3ರಂದು 25ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಸಂಚಾರ ನಿಯಮಗಳನ್ನು ಪಾಲಿಸದಿದ್ದರೆ ಶಿಕ್ಷೆ ತಪ್ಪಿದ್ದಲ್ಲ ಎಂದು ಸ್ಥಳೀಯ ನ್ಯಾಯಾಲಯ ಸಾಬೀತು ಪಡಿಸಿದ್ದು, ಪಾಲಕರು ಮಕ್ಕಳಿಗೆ ಬೈಕ್ ನೀಡುವ ಮೊದಲು ಎಚ್ಚರಿಕೆ ವಹಿಸಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net