ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸಾವು

Bike Accident_2
Published on

ಹಾನಗಲ್ಲ: ಬೈಕ್ ಸವಾರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಾಲೂಕಿನ ರಾಮತೀರ್ಥಹೊಸಕೊಪ್ಪ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಗ್ರಾಮದ ಕುಮಾರ ವೀರನಗೌಡ ಪಾಟೀಲ (30) ಮೃತ ವ್ಯಕ್ತಿ.
ಈತ ಬೈಕ್ ಮೇಲೆ ಹಾನಗಲ್ಲ ಗ್ರಾಮದಿಂದ ರಾಮತೀರ್ಥಹೊಸಕೊಪ್ಪ ಗ್ರಾಮಕ್ಕೆ ಬರುತ್ತಿದ್ದ ಸಮಯದಲ್ಲಿ ರಸ್ತೆ ಮಧ್ಯೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net