ಬೈಕ್​ನಿಂದ ಬಿದ್ದು ಸವಾರ ಸಾವು

Bike Accident_2
Published on

ರಾಣೆಬೆನ್ನೂರ: ಬೈಕ್​ನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಮದೋಡ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ನಗರದ ಅಡವಿ ಆಂಜನೇಯ ಬಡಾವಣೆ ನಿವಾಸಿ ಗೋವಿಂದ ಮಲ್ಲೇಶಪ್ಪ ಕಡೆಮಂಚದವರ (30) ಮೃತ ವ್ಯಕ್ತಿ.

ಇವರು ಹರಿಹರ ಕಡೆಯಿಂದ ರಾಣೆಬೆನ್ನೂರಿಗೆ ಬರುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net