ಮೈಮೇಲೇ ಲಾರಿ ಚಲಿಸಿ 3 ವರ್ಷದ ಮಗು ಸ್ಥಳದಲ್ಲೇ ಸಾವು; ಪುತ್ರಿಯೊಂದಿಗೆ ದಂಪತಿ ಸಾಗುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ

Untitled-2
Published on

ನೆಲಮಂಗಲ: ಗಂಡ-ಹೆಂಡತಿ ಹಾಗೂ ಮಗು ಒಟ್ಟಿಗೇ ತೆರಳುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ್ದಿದ್ದು, ಕೆಳಕ್ಕೆ ಬಿದ್ದ ಮಗುವಿನ ಮೇಲೆಯೇ ಲಾರಿ ಚಲಿಸಿ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನೆಲಮಂಗಲದ ಬಳಿ ಇಂಥದ್ದೊಂದು ದುರ್ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ರಸ್ತೆಯ ನೆಲಮಂಗಲದ ಹುರುಳಿಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ದಾಸನಪುರದ ಶ್ರೀನಿವಾಸಮೂರ್ತಿ ಹಾಗೂ ಕಲಾವತಿ ದಂಪತಿ ಬೈಕ್​ನಲ್ಲಿದ್ದು, ಅವರ ಪುತ್ರಿ ಶ್ರಾವಣಿ (3) ಮೃತಪಟ್ಟಿದ್ದಾಳೆ.

ಲಾರಿ-ಬೈಕ್​ ಡಿಕ್ಕಿಯಾದಾಗ ಮೂರು ವರ್ಷದ ಶ್ರಾವಣಿ ಬೈಕ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅವಳ ಮೇಲೆ ಲಾರಿ ಸಾಗಿಹೋಗಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಅಪಘಾತದಲ್ಲಿ ಶ್ರೀನಿವಾಸಮೂರ್ತಿ ಹಾಗೂ ಕಲಾವತಿ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾವತಿ ತನ್ನ ತಂಗಿಯ ಮದುವೆಗಾಗಿ ಪತಿ ಮತ್ತು ಪುತ್ರಿಯೊಂದಿಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net