ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಸಾವು

Bike Accident
Published on

ಕಾನಹೊಸಹಳ್ಳಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ರಾತ್ರಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಹಿಂಬದಿ ಸವಾರ ಮೃತಪಟ್ಟಿದ್ದಾನೆ.

ಕಾತ್ರಿಕೆಹಟ್ಟಿ ನಿವಾಸಿ ನಾಗರಾಜ (50) ಮೃತ. ಬೈಕ್ ಸವಾರ ಓಬಣ್ಣ ಗಾಯಗೊಂಡಿದ್ದು, ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಘದ ಕೆಲಸದ ನಿಮಿತ್ತ ಕಾನಹೊಸಹಳ್ಳಿಗೆ ಬಂದಿದ್ದು, ಮರುಳುವಾಗ ಎನ್‌ಎಚ್50ರಲ್ಲಿ ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿದೆ.

ನಾಗರಾಜ ತಲೆಗೆ ತೀವ್ರ ಪೆಟ್ಟಾಗಿದ್ದು, ಕಾನಹೊಸಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಮೃತನ ಪತ್ನಿ ಮಲ್ಲಮ್ಮ ನೀಡಿದ ದೂರಿನನ್ವಯ ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net