

ಶಿಗ್ಗಾಂವಿ: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಶಿಗ್ಗಾಂವಿ-&ಸವಣೂರ ರಸ್ತೆಯಲ್ಲಿ ಸೋಮವಾರ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ವೆಂಕಟೇಶ ಹನುಮಂತಪ್ಪ ವಡ್ಡರ (35) ಮೃತ ವ್ಯಕ್ತಿ.
ಈತ ಬೈಕ್ ಮೇಲೆ ಶಿಗ್ಗಾಂವಿ ಕಡೆಯಿಂದ ಸವಣೂರ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.