

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡರವರ ಪರ ಮತಯಾಚಿಸುವ ಸಲುವಾಗಿ ಮೇ೫ ರಂದು ನಗರದಲ್ಲಿ ಬೈಕ್ ಜಾಥಾ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಫೀ.ಮಾ.ಕಾರ್ಯಪ್ಪ ಕಾಲೇಜು ರಸ್ತೆಯಿಂದ ಹಳೆಯ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತ ಮತ್ತು ಫೀ.ಮಾ.ಕಾರ್ಯಪ್ಪ ವೃತ್ತದವರೆಗೆ ಬೃಹತ್ ಬೈಕ್ ಜಾಥಾ ನಡೆಯಲಿದೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.