ಮರಳು ಮಾಫಿಯಾ ವಿರುದ್ಧ ಬೈಕ್ ರ‍್ಯಾಲಿ

New PM 2 New
Published on

ಹುಬ್ಬಳ್ಳಿ : ಮರಳು ಮಾಫಿಯಾ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ಮೇ 6ರಂದು ಅವಳಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ, ಬೆಳಗ್ಗೆ 11.30ಕ್ಕೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಡಾ. ಅಂಬೇಡ್ಕರ ವೃತ್ತದಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಹಾಗೂ ಮತ್ತಿತರ ವಾಹನಗಳ ರ‍್ಯಾಲಿ ನಡೆಸಲಾಗುವುದು. ಮರಳು ಮಾಫಿಯಾ ತಡೆಗಟ್ಟುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಡಳಿತದಿಂದ ಮರಳು ಮಾಫಿಯಾ ತಡೆಯಲು ಆಗದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು. ಹೋರಾಟವನ್ನು ಹಂತ ಹಂತವಾಗಿ ರಾಜ್ಯಾದ್ಯಂತ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ ಸಿಬ್ಬಂದಿ ಹಾಗೂ ವಾಹನಗಳ ಕೊರತೆ ಇದ್ದು, ಅಕ್ರಮ ಮರಳು ಮಾಫಿಯಾ ತಡೆಗಟ್ಟಲು ಆಗಿರುವ ವೈಫಲ್ಯಕ್ಕೆ ಇದೂ ಒಂದು ಕಾರಣ. ತಕ್ಷಣ ಸಮರ್ಪಕ ಸಿಬ್ಬಂದಿ ನೇಮಿಸಿ, ಅಗತ್ಯ ವಾಹನಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ ತಾಲೂಕು ಅಧ್ಯಕ್ಷ ಪ್ರವೀಣ ಗಾಯಕವಾಡ ಹಾಗೂ ಅಮಿತ ನಲವಟೆ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net