ವಿಕಲಚೇತನರಿಂದ ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ

DSC_0421
Published on


ಗದಗ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಪ್ರಯುಕ್ತ  ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7 ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,   ಗದಗ-ಬೆಟಗೇರಿ ನಗರಸಭೆ   ವತಿಯಿಂದ  ವಿಕಲಚೇತನರಿಂದ  ಸೋಮವಾರ  ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ/ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.  ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯರ್ನಿಹಣಾಧಿಕಾರಿ ಭರತ್ ಎಸ್  ಅವರು ರ್ಯಾಲಿಗೆ ಚಾಲನೆ ನೀಡಿದರು.  

ರ್ಯಾಲಿಯು ಭೂಮರಡ್ಡಿ ಸರ್ಕಲ್‍ದಿಂದ ಗಾಂಧಿ ವೃತ್ತದವರೆಗೆ ಬಂದು ತಲುಪಿತು. ವಿಕಲಚೇತನರ ಯಂತ್ರಚಾಲಿತ ತ್ರಿಚಕ್ರ ವಾಹನದ ಬೈಕ್ ರ್ಯಾಲಿ ಮಾಡುವುದರ ಮೂಲಕ 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು  ಹಾಗೂ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರು ತಮ್ಮ ಮತವನ್ನು ಚಲಾಯಿಸಲು ಹಾಗೂ ಅದರಲ್ಲಿಯೂ ವಿಶೇಷವಾಗಿ ವಿಕಲಚೇತನರು ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಬಿ.ದೇವರಮನಿ, ಗದಗ-ಬೆಟಗೇರಿ ನಗರಸಭೆ ಆಯುಕ್ತರಾದ ಪ್ರಶಾಂತ ವರಗಪ್ಪನವರ,  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಮಹಾಂತೇಶ, ಜಿಲ್ಲೆಯ ಎಲ್ಲಾ ತಾಲೂಕಿನ ಎಮ್.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಯು.ಆರ್.ಡಬ್ಲ್ಯೂಗಳು ಹಾಗೂ ವಿಕಲಚೇತನರು ಪಾಲ್ಗೊಂಡಿದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net