

ರಾಣೆಬೆನ್ನೂರ: ಬೈಕ್ನಿಂದ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಕಜ್ಜರಿ ಗ್ರಾಮದ ಬಳಿ ಸೋಮವಾರ ನಡೆದಿದೆ.
ಗ್ರಾಮದ ಚನ್ನಬಸಪ್ಪ ಫಕ್ಕೀರಪ್ಪ ಕನಕಾಪುರ (40) ಮೃತ ವ್ಯಕ್ತಿ.
ಈತ ಕಾಕೋಳ ಗ್ರಾಮದಿಂದ ಕಜ್ಜರಿ ಗ್ರಾಮಕ್ಕೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.