ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

Published on

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಬಳಿ ಸೋಮವಾರ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.


ತಮಿಳುನಾಡು ಧರ್ಮಪುರಿ ಜಿಲ್ಲೆ ಪೆನ್ನಾನಗರ ತಾಲೂಕಿನ ದೊರೆಸ್ವಾಮಿ(54) ಮೃತ್ತ ದುರ್ದೈವಿ. ಈತ ಮಧುವನಹಳ್ಳಿ ರಸ್ತೆ ಮಾರ್ಗವಾಗಿ ತಮ್ಮ ಪುತ್ರಿಯನ್ನು ನೋಡಲು ಜಾಗೇರಿ ಗ್ರಾಮದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಪರಿಣಾಮ ಸವಾರ ತೀವ್ರ ಗಾಯಗೊಂಡಿದ್ದರು. ಇವರನ್ನು ಮೈಸೂರು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ದೊರೆಸ್ವಾಮಿ ಸೋಮವಾರ ಮಧ್ಯರಾತ್ರಿಯೇ ಮೃತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net