ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

2 mlv 1 ಬೋರಯ್ಯ 55
Published on

ಮಳವಳ್ಳಿ: ತಾಲೂಕಿನ ಹೂವಿನಕೊಪ್ಪಲು ಬಳಿ ಮೈಸೂರು ಮುಖ್ಯರಸ್ತೆಯಲ್ಲಿ ಭಾನುವಾರ ಅಪರಿಚಿತ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬುಳ್ಳಿಕೆಂಪನದೊಡ್ಡಿ ಗ್ರಾಮದ ಬೋರಯ್ಯ(55) ಮೃತರು. ಭಾನುವಾರ ತಮ್ಮ ಬೈಕ್‌ನಲ್ಲಿ ಜಮೀನಿಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕೂಡಲೇ ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ನಂತರ ಕುಟುಂಬದವರು ವೈದ್ಯರ ಸಲಹೆಯಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net