

ಕಾರ್ಕಳ: ಪುಲ್ಕೇರಿಯಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ಅವರ ಪುತ್ರ ನಿಜಾಂ ಅಹ್ಮದ್ (22) ಮೃತಪಟ್ಟ ಯುವಕ. ಕೆಲಸಕ್ಕೆಂದು ಬೆಳಗ್ಗೆ 10.30ಕ್ಕೆ ಸಾಣೂರಿನಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್‌ಟೇಕ್ ಮಾಡುವಾಗ ಎದುರಿನಿಂದ ಬಂದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಟಿಪ್ಪರ್ ಅಡಿಗೆ ಬಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.