

ಹಾವೇರಿ: ಯಾವುದೋ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಕಂಚಾರಗಟ್ಟಿ ಕ್ರಾಸ್ ಬಳಿ ಭಾನುವಾರ ನಡೆದಿದೆ.
ತಾಲೂಕಿನ ಹೌಂಶಿ ಗ್ರಾಮದ ಪ್ರವಿಣ ಗಂಗಾಧರ ಮಡಿವಾಳರ ಮೃತ ವ್ಯಕ್ತಿ.
ಈತ ಬೈಕ್ ಓಡುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ಪ್ರವಿಣ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.