

ಶಿವಮೊಗ್ಗ: ನಗರದ ಹೊರವಲಯದ ಗಾಲ್ಫ್ ಕ್ಲಬ್ ರಸ್ತೆಯಲ್ಲಿ ಅಕ್ಕಿಮೂಟೆ ಸಾಗಿಸುತ್ತಿದ್ದ ಕೇರಳ ಮೂಲದ ಬೈಕ್ ಸವಾರ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಕೇರಳ ರಾಜ್ಯ ಎರ್ನಾಕುಲಂನ ಜೋಬಿ ಪೌಲ್ (45) ಮೃತ ಬೈಕ್ ಸವಾರ. ಈತ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದು ಸಾಗರ ರಸ್ತೆಯ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆ ಖರೀದಿಸಿ ಅದನ್ನು ಬೈಕ್‌ನ ಮುಂಭಾಗದಲ್ಲಿ ಇರಿಸಿಕೊಂಡು ಫಾರಂಗೆ ಹಿಂತಿರುಗುತ್ತಿದ್ದರು. ಈ ಸಂದರ್ಭ ನಿಯಂತ್ರಣ ತಪ್ಪಿದ ಬೈಕ್ ಗುಂಡಿಗೆ ಬಿದ್ದಿದೆ. ಗುಂಡಿಗೆ ಬಿದ್ದ ಜೋಬಿ ಪೌಲ್ ತಲೆ ಸಿಮೆಂಟ್ ಕಂಬಕ್ಕೆ ತಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.