ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

crime
Published on

ನಗರದ ಕೆ.ಆರ್.ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಕೇರಳದ ಯುವಕನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

ಕೇರಳದ ವಟ್ಟಪಾರಂಬಿಲ್ ನಿವಾಸಿ ಶಿಹಾಬ್ ಮೃತ ಬೈಕ್ ಸವಾರ. ಮಂಗಳವಾರ ರಾತ್ರಿ ಬುಲೆಟ್ ಬೈಕ್‌ನಲ್ಲಿ ನಂಜನಗೂಡು ಮಾರ್ಗವಾಗಿ ಕೇರಳದಿಂದ ಮೈಸೂರಿಗೆ ಬರುವಾಗ ಸಚ್ಚಿದಾನಂದ ಆಶ್ರಮದ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತೀವ್ರವಾಗಿ ತಲೆಗೆ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಗಾಯಗೊಂಡ ಹಿಂಬದಿ ಸವಾರನಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೆ.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net