

ಶಿರಸಿ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ಶಿರಸಿ- ಯಲ್ಲಾಪುರ ರಸ್ತೆಯ ತಾರಗೋಡ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ತಾಲೂಕಿನ ಹಕ್ಕಿಮನೆಯ ಪ್ರಶಾಂತ ಹೆಗಡೆ (46) ಮೃತ ಸವಾರ. ಗಂಭೀರ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.