ಅಪಘಾತದಲ್ಲಿ ಬೈಕ್ ಸವಾರ ಸಾವು

bhr sanjay
Published on

ಬಾಳೆಹೊನ್ನೂರು: ಹಿರೇಗದ್ದೆ ಗ್ರಾಮದಲ್ಲಿ ಭಾನುವಾರ ಕಾರು ಮತ್ತು ಬೈಕು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ರೇಣುಕನಗರದ ಸಂಜಯ್ ಆಚಾರ್ಯ (23) ಮೃತ ದುರ್ದೈವಿ. ಸಂಜಯ್ ಆಚಾರ್ಯ ಬೆಳಗ್ಗೆ ಹಿರೇಗದ್ದೆ ಗ್ರಾಮದಲ್ಲಿನ ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ತೆರಳಿ ವಾಪಸ್ ಬರುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಳೆಹೊನ್ನೂರು ಪಿಎಸ್‌ಐ ರವೀಶ್ ಸ್ಥಳ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net