ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

28hgr1
Published on

ಹಲಗೂರು: ಸಮೀಪದ ಎಚ್.ಬಸಾಪುರ ಗ್ರಾಮದ ಬಳಿ ಶನಿವಾರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಕುಲುಮೆದೊಡ್ಡಿ ಗ್ರಾಮದ ಜನತಾ ಕಾಲನಿ ನಿವಾಸಿ ನಿಂಗರಾಜು (33) ಮೃತರು. ಇವರು ಕನಕಪುರ ತಾಲೂಕಿನ ಹಲಸೂರು ಗ್ರಾಮದಲ್ಲಿರುವ ಪತ್ನಿ ಮನೆಗೆ ತಮ್ಮ ಮಗುವನ್ನು ಬಿಡಲು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕನಕಪುರ ಕಡೆಯಿಂದ ವೇಗವಾಗಿ ಬಂದ ಅಪರಿಚಿತ ಬೈಕ್, ನಿಂಗರಾಜು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಮಗು ರಸ್ತೆ ಬದಿಗೆ ಬಿದ್ದಿದ್ದು, ಸಣ್ಣಪುಟ್ಡ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದೆ. ರಸ್ತೆಗೆ ಬಿದ್ದ ನಿಂಗರಾಜು ಅವರ ಮೇಲೆ ಜೆಸಿಬಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪರಿಚಿತ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಸ್ಥಳಕ್ಕೆ ಸಬ್‌ಇನ್ಸ್ ಪೆಕ್ಟರ್ ಬಿ.ಮಹೇಂದ್ರ ಭೇಟಿ ಪರೀಲಿಸಿ ಮುಂದಿನ ಕ್ರಮ ಕೈಗೊಂಡರು. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net