ಬೈಕ್‌ನಿಂದ ಬಿದ್ದು ಸವಾರ ಸಾವು

Bike Accident_2
Published on

ಹಾವೇರಿ: ಬೈಕ್‌ನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಳ್ಳಿಹಾಳ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.
ಗ್ರಾಮದ ವೀರಣ್ಣ (ಗುರುನಾಥ) ಚಂದ್ರಪ್ಪ ಹೊಳಿಯಣ್ಣನವರ (27) ಮೃತ ದುರ್ದೈವಿ.
ಈತ ತೋಟದಯಲ್ಲಾಪುರ ಕಡೆಯಿಂದ ಕಳ್ಳಿಹಾಳಕ್ಕೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಬೈಕ್‌ನಿಂದ ಬಿದ್ದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net