ಅಪಘಾತದಲ್ಲಿ ಬೈಕ್ ಸವಾರರಿಗೆ ಗಾಯ

14kgl3 (1)
ದೊಡ್ಡಿಂದುವಾಡಿ ಗ್ರಾಮದ ಬಳಿ ಆಟೋ ಹಾಗು ಬೈಕ್ ನಡುವೆ ಅಪಘಾಯ ಏರ್ಪಟ್ಟಿರುವುದು.
Published on

ಕೊಳ್ಳೇಗಾಲ: ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಬಳಿ ಆಟೋ ಮತ್ತು ಬೈಕ್ ನಡುವೆ ಗುರುವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಸುದೀಪ್ (20) ಹಾಗೂ ಚಂದ್ರು (25) ಗಾಯಾಳುಗಳು. ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಬರುತಿದ್ದಾಗ ದೊಡ್ಡಿಂದುವಾಡಿ ಗ್ರಾಮದ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ತೀವ್ರವಾಗಿ ಗಾಯಗೊಂಡಿದ್ದ ಸವಾರರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net