ಹನೂರು: ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆಯ ಬಳಿ ಬುಧವಾರ ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಸವಾರ ಗಾಯಗೊಂಡಿದ್ದಾನೆ.
ತಾಲೂಕಿನ ಗಾಜನೂರು ಗ್ರಾಮದ ಶಿವಣ್ಣ (50) ಗಾಯಗೊಂಡವರು. ಈತ ಬೆಳಗ್ಗೆ ಕಾರ್ಯನಿಮಿತ್ತ ಬೈಕ್‌ನಲ್ಲಿ ಹನೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಹನೂರಿನಿಂದ ಕೊಳ್ಳೇಗಾಲ ಕಡೆಗೆ ತೆರಳುತ್ತಿದ್ದ ಪ್ರಾಧಿಕಾರಕ್ಕೆ ಸೇರಿದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರರಿಗೆ ತಲೆಗೆ ಪೆಟ್ಟಾಗಿದ್ದು, ಸ್ಥಳೀಯರು ತುರ್ತು ವಾಹನದ ಮೂಲಕ ಗಾಯಾಳುವನ್ನು ಕಾಮಗೆರೆ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.