ಬೆಂಗಳೂರಿನಲ್ಲಿ BMTC ವೋಲ್ವೋ ಬಸ್​ಗೆ ಬೈಕ್ ಸವಾರ ಬಲಿ

BMTC Volvo bus
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಬೆಂಗಳೂರಿನ ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್​ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ.

ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ​ ಈ ಅಪಘಾತದಿಂದ ಬೈಕ್ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ. ಹೆಚ್​ಎಎಲ್​​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net