ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

Published on

ಮೈಸೂರು: ನಗರದ ಆರ್.ಟಿ. ನಗರ ಮಾರಮ್ಮನ ದೇವಸ್ಥಾನದ ಬಳಿ ಭಾನುವಾರ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿದ್ದಾರೆ.
ಸರಗೂರು ತಾಲೂಕು ಸಾಗರೆ ಗ್ರಾಮದ ಭೈರನಾಯಕ ಅವರ ಪುತ್ರ ನಾಗರಾಜು(38)ಮೃತರು. ಹಿಂಬದಿ ಸವಾರ ನಾಗೇಂದ್ರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೇಂಟಿಂಗ್ ಕೆಲಸ ಮಾಡುತ್ತಿದ್ದ ಇಬ್ಬರೂ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಊರಿಗೆ ಹಿಂತಿರುಗುತ್ತಿದ್ದಾಗ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳು ನೀಡಿದ ದೂರಿನ ಮೇರೆಗೆ ಕುವೆಂಪುನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net