ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Published on

ಹನೂರು: ತಾಲೂಕಿನ ಕೌದಳ್ಳಿ-ವಡಕೆಹಳ್ಳ ಮಾರ್ಗಮಧ್ಯೆ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಮಲೆಮಹದೇಶ್ವರ ಬೆಟ್ಟ ಸಮೀಪದ ಕೊಕ್ಕಬರೆ ಗ್ರಾಮದ ಶಿವರುದ್ರ (40) ಮೃತ. ಈತ ಸಂಜೆ ಕಾರ್ಯನಿಮಿತ್ತ ಮ.ಬೆಟ್ಟದಿಂದ ಕೌದಳ್ಳಿ ಕಡೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.


ಸುದ್ದಿ ತಿಳಿದು ರಾಮಾಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಈಶ್ವರ್ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net