

ಮಳವಳ್ಳಿ: ತಾಲೂಕಿನ ಮಿಕ್ಕೆರೆ ಸಮೀಪ ಕಿರುಗಾವಲು-ಮಂಡ್ಯ ಮುಖ್ಯರಸ್ತೆಯಲ್ಲಿ ಸೋಮವಾರ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ.
ತಾಲೂಕಿನ ದೋರನಹಳ್ಳಿ ಗ್ರಾಮದ ಸ್ವಾಮಿ ಅವರ ಪುತ್ರ ಮುನೇಶ್(23), ಹಿಂಬದಿ ಸವಾರ ಈಶ್ವರ ಗಾಯಾಳು. ಕಿರುಗಾವಲಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಮಂಡ್ಯದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭದಕ್ಕೆ ಸವಾರ ಮುನೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಈಶ್ವರ್ ಎಂಬಾತನಿಗೆ ಕಿರುಗಾವಲು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.