

ಶಿಗ್ಗಾಂವಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪೆಟ್ರೋಲ್ ಬಂಕ್ ಬಳಿ ಬೈಕ್ಗೆ ಖಾಸಗಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶ್ಯಾಡಂಬಿ ಗ್ರಾಮದ ಶೇಕಪ್ಪ ದ್ಯಾಮಪ್ಪ ಭೀಮನವರ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಿಎಸ್ಐ ಪರಶುರಾಮ ನಿರೋಳ್ಳಿ ತನಿಖೆ ಕೈಗೊಂಡಿದ್ದಾರೆ.