ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

Bike Accident_2
Published on

ಬ್ಯಾಡಗಿ: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ನಾಕನಕಟ್ಟಿ ಕೆರೆಯ ಬಳಿ ಸೋಮವಾರ ನಡೆದಿದೆ.
ಹಾನಗಲ್ಲ ತಾಲೂಕಿನ ತಾವರಗೊಪ್ಪ ಗ್ರಾಮದ ಶಂಕರ ಪುಟ್ಟಪ್ಪ ಕೋಟಿ (30) ಮೃತ ದುರ್ದೈವಿ.
ಇವರು ಚಿಕ್ಕಬಾಸೂರ ಗ್ರಾಮದಿಂದ ಹಿರೇಹಳ್ಳಿಗೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಬೈಕ್ ಸ್ಕಿಡ್ ಆಗಿದೆ. ಇದರಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net