ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

Bike Accident_2
Published on

ಹಾನಗಲ್ಲ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ.
ತಾಲೂಕಿನ ದಶರಥಕೊಪ್ಪದ ನಿವಾಸಿ ಬಸವನಗೌಡ ಚನ್ನಬಸವನಗೌಡ ಪಾಟೀಲ (45) ಮೃತ ವ್ಯಕ್ತಿ.
ಇವರು ಹಾನಗಲ್ಲ ಬೈಚವಳ್ಳಿ ಗ್ರಾಮದ ರಸ್ತೆಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net