

ಹಾವೇರಿ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ನೆಗಳೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಸುನೀಲ ಸುರೇಶ ತಾವರೆ (46) ಮೃತ ಬೈಕ್ ಸವಾರ.
ಈತ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.