ಬೈಕ್ ಸ್ಕಿಡ್ ಆಗಿ ಬಿದ್ದು ಹಿಂಬದಿ ಕುಳಿತ್ತಿದ್ದ ಮಹಿಳೆ ಸಾವು

Bike Accident_2
Published on

ಹಿರೇಕೆರೂರ: ಬೈಕ್ ಸ್ಕಿಡ್ ಆಗಿ ಬಿದ್ದು ಹಿಂಬದಿ ಕುಳಿತ್ತಿದ್ದ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಹಂಸಭಾವಿಯಲ್ಲಿ ಮಂಗಳವಾರ ನಡೆದಿದೆ.
ರಾಣೆಬೆನ್ನೂರ ನಗರದ ನಾಜಿಯಾ ರಹಮತವುಲ್ಲಾ ಮಕಾಂದಾರ (38) ಮೃತ ಮಹಿಳೆ. ಬೈಕ್ ಓಡಿಸುತ್ತಿದ್ದ ಮಖಬುಲ್ ಮಕಾಂದಾರ ಎಂಬುವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ಇವರು ಹಂಸಭಾವಿಯಿಂದ ರಾಣೆಬೆನ್ನೂರ ನಗರಕ್ಕೆ ಹೊರಟಿದ್ದರು. ದಾರಿ ಮಧ್ಯೆ ಬೈಕ್ ಸ್ಕಿಡ್ ಆಗಿ ಬಿದ್ದಿದ್ದರಿಂದ ನಾಜಿಯಾಳ ತಲೆಗೆ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಹಂಸಭಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net