ಬೈಕ್​ ಸ್ಕಿಡ್​ ಆಗಿ ಬಿದ್ದು ಸವಾರ ದುರ್ಮರಣ

Crime Logo
Published on

ರಾಣೆಬೆನ್ನೂರ: ಬೈಕ್​ ಸ್ಕಿಡ್​ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ಇಲ್ಲಿಯ ಕಮಲಾ ನಗರದಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ಚಳಗೇರಿ ಗ್ರಾಮದ ಸೋಮಪ್ಪ ಹರಿಯಪ್ಪ ಕರೂರ (60) ಮೃತ ವ್ಯಕ್ತಿ.

ಇವರು ಚಳಗೇರಿ ಕಡೆಯಿಂದ ರಾಣೆಬೆನ್ನೂರಿಗೆ ಬರುತ್ತಿದ್ದ ಸಮಯದಲ್ಲಿ ಬೈಕ್​ ಸ್ಕಿಡ್​ ಆಗಿ ಬಿದ್ದಿದ್ದಾರೆ. ಇದರಿಂದಾಗಿ ಗಂಭೀರವಾಗಿ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net