ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Crime Logo
Published on

ಹಾವೇರಿ: ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸಿದ ಪೊಲೀಸರು 3.5 ಲಕ್ಷ ರೂ. ಮೌಲ್ಯದ 10 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದ ಚಾಂದಬಾಷಾ ಅಬ್ದುಲ್ ಸತ್ತಾರ ಶಿಕಾರಿಪುರ ಹಾಗೂ ತಾಲೂಕಿನ ದೇವಿಹೊಸೂರ ಗ್ರಾಮದ ಮೆಹಬೂಬ ಜಾಪರಸಾಬ ಮನ್ನಂಗಿ ಬಂಧಿತ ಆರೋಪಿತರು.

ಇವರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಈ ಕುರಿತು ಎಸ್ಪಿ ಅಂಶಕುಮಾರ ಮಾರ್ಗದರ್ಶನದಲ್ಲಿ ತಂಡ ರಚಿಸಿದ ಶಹರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಹರ ಠಾಣೆ ಪಿಐ ಮೋತಿಲಾಲ ಪವಾರ, ಸಿಬ್ಬಂದಿ ಎಂ.ಕೆ. ಸೊರಟೂರ, ಎಂ.ಜಿ. ಯರೇಶಿಮೆ, ಎಸ್.ಜಿ. ವಡ್ನಿಕೊಪ್ಪ, ಮುತ್ತಪ್ಪ ಲಮಾಣಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net