

ಹಾರೋಹಳ್ಳಿ: ಇಬ್ಬರು ಬೈಕ್ ಕಳವು ಆರೋಪಿಗಳನ್ನು ಬಂಧಿಸಿರುವ ಕಗ್ಗಲಿಪುರ ಪೊಲೀಸರು 4 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಹಾರೋಹಳ್ಳಿ ತಾಲೂಕು ಮೆಡಮಾರನಹಳ್ಳಿಯ ಲಿಂಗರಾಜು (20), ಬೆಂಗಳೂರು ದಣ ತಾಲೂಕು ಹೊಸಪಾಳ್ಯ ಕಾಲನಿಯ ರು (20) ಬಂಧಿತರು.
ಬೆಂಗಳೂರು ರಸ್ತೆಯ ತಾತಗುಣಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಇಬ್ಬರು ಪೊಲೀಸ್ ವಾಹನ ಕಂಡ ತಕ್ಷಣ ಓಡಲು ಪ್ರಾರಂಭಿಸಿದ್ದಾರೆ. ಅನುಮಾನಗೊಂಡ ಪೊಲೀಸರು ಇಬ್ಬರನ್ನು ಹಿಡಿದು ವಿಚಾರಣೆಗೊಳಪಡಿಸಿದಾಗ ಬಸ್ ನಿಲ್ದಾಣದ ಬಳಿ ಹಾಗೂ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಕುಂಬಳಗೂಡು ತಲಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.