

ಬೆಳಗಾವಿ : ಮಾರುಕಟ್ಟೆ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ನಗರ ಪೊಲೀಸರು ಆರು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಸವದತ್ತಿ ತಾಲೂಕಿನ ಇಂಚಲ ಗ್ರಾಮದ ಸಂತೋಷ ಶಿವಪ್ಪ ಬೇವಿನಕೊಪ್ಪ(29) ಹಾಗೂ ಬೆಳಗಾವಿಯ ಶ್ರೀನಗರ ಗಾರ್ಡನ್ ಬಡವಾಣೆಯ ನಿವಾಸಿ ಅಬುಬಕರ್ ಸಿಕಂದರ್ ಸವದಿ(21) ಬಂಧಿತರು. ಇತ್ತೀಚೆಗೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದವು. ಈ ಬಗ್ಗೆ ತನಿಖೆ ಆರಂಭಿಸಿದ ಸಿಪಿಐ ಮಹಾಂತೇಶ ಧಾಮಣ್ಣವರ ನೇತೃತ್ವದ ತಂಡ ಗುರುವಾರ ಇಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಬಂಧಿತರಿಂದ 2.40 ಲಕ್ಷ ರೂ.ಮೌಲ್ಯದ 6 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.