

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧೆಡೆ ಬೈಕ್, ಸ್ಕೂಟಿ ಕಳವು ಮಾಡುತ್ತಿದ್ದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ 10 ಲಕ್ಷ ರೂ. ಮೌಲ್ಯದ 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಇಲ್ಲಿಯ ಅಮರಗೋಳ ನಿವಾಸಿ ಶಂಕರ ಗಡೇಕರ ಬಂಧಿತ. ವಿದ್ಯಾನಗರ ಠಾಣೆಯಲ್ಲಿ 10, ಧಾರವಾಡ ಉಪನಗರ ಠಾಣೆಯಲ್ಲಿ ಮೂರು ಹಾಗೂ ಕಲಘಟಗಿ ಮತ್ತು ಯಲ್ಲಾಪುರ ಠಾಣೆಯಲ್ಲಿ ದಾಖಲಾದ ತಲಾ ಒಂದು ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದೆ.