ಬೈಕ್ ಕಳ್ಳನ ಬಂಧನ, 1.30 ಲಕ್ಷ ರೂ. ಮೌಲ್ಯದ 4 ವಾಹನಗಳ ವಶ

Published on

ಮೈಸೂರು: ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, 1.30 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ.

ಗ್ರಾಮಾಂತರ ಬಸ್ ನಿಲ್ದಾಣದ ಬಳಿ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚಣೆ ನಡೆಸಿದ ಪೊಲೀಸರು, ನ.23ರಂದು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆತನಿಂದ ಕಳವು ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಲಷ್ಕರ್ ಪೊಲೀಸ್ ಠಾಣೆಯ ಎರಡು, ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net